ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಡಿ.ಆರ್.ಜಯರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಪ್ರದರ್ಶಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದು ಗುಬ್ಬಿಯ ಶ್ರೀ ಚನ್ನಬಸವೇಶ್ವರ ಟಾಕೀಸ್‍ನ ಮಾಲೀಕರಾದ ಡಿ.ಆರ್.ಜಯರಾಜ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ಬಾರಿಯ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಬಾರಿ ಪೈಪೋಟಿ ಏರ್ಪಟ್ಟಿತ್ತಾದರೂ, ನಿನ್ನೆ ನಡೆದ ಸಭೆಯಲ್ಲಿ ರಾಕ್‍ಲೈನ್ ವೆಂಕಟೇಶ್, ನರಸಿಂಹಲು ಮತ್ತು ಸುಂದರ್‍ರಾಜ್ ಅವರು ಅಖಾಡದಿಂದ ಹಿಂದೆ ಸರಿದಿದ್ದರಿಂದ ಜೈರಾಜ್ ಅವಿರೋಧವಾಗಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು.
ಪ್ರತಿವರ್ಷದಂತೆ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕ ವಲಯಗಳಿಗೆ ಚುನಾವಣೆ ನಡೆಯುತ್ತದೆ. ಉಪಾಧ್ಯಕ್ಷ ಹಾಗೂ ಗೌರವ ಕಾರ್ಯದರ್ಶಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ವಲಯ ಸಮಿತಿಗಳಿಗೆ ಇದೇ 29ರಂದು ಚುನಾವಣೆ ನಡೆಯಲಿದೆ
.
ಉಪಾಧ್ಯಕ್ಷ ಹಾಗೂ ಗೌರವ ಕಾರ್ಯದರ್ಶಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ವಲಯ ಸಮಿತಿಗಳಿಗೆ ಇದೇ 29ರಂದು ಚುನಾವಣೆ ನಡೆಯಲಿದೆ.
29ರಂದು ಬೆಳಿಗ್ಗೆ ಸರ್ವ ಸದಸ್ಯರ ಸಭೆ ನಡೆಯಲಿದ್ದು, ಮಧ್ಯಾಹ್ನ 2ಗಂಟೆ ನಂತರ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿ ಅಂದು ರಾತ್ರಿ 8ಗಂಟೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯೂ ಇವಿಎಂಗಳ ಮೂಲಕ ಮತ ಚಲಾವಣೆಯಾಗಲಿದೆ






