ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Date:

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಶೀತದಲೆ ತೀವ್ರವಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಭಾರೀ ಚಳಿ ಅನುಭವಿಸಲಾಗುತ್ತಿದೆ. ನಿನ್ನೆ ವಿಜಯಪುರದಲ್ಲಿ ರಾಜ್ಯದಲ್ಲೇ ಅತಿ ಕಡಿಮೆ ಉಷ್ಣಾಂಶ ದಾಖಲಾಗಿದ್ದು, ಇಂದು 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಮುಂದುವರಿದಿದ್ದು, ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ನಿನ್ನೆ ವಿಜಯಪುರದಲ್ಲಿ 6.9 ಡಿಗ್ರಿ ಸೆಲ್ಸಿಯಸ್ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಕಳೆದ 20 ವರ್ಷಗಳ ಅಂಕಿಅಂಶಗಳ ಪ್ರಕಾರ ಇದು ಮೂರನೇ ಬಾರಿಗೆ ದಾಖಲಾಗಿರುವ ಅತ್ಯಂತ ಕಡಿಮೆ ಉಷ್ಣಾಂಶವಾಗಿದೆ. ಉತ್ತರ ಕರ್ನಾಟಕದ ಹಲವೆಡೆ ಶೀತದಲೆ ತೀವ್ರವಾಗಿರುವ ಹಿನ್ನೆಲೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ತೀವ್ರ ಚಳಿಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಬೆಚ್ಚಗಿನ ಬಟ್ಟೆಗಳನ್ನು ಧರಿಸಬೇಕು ಹಾಗೂ ಬಿಸಿ ಆಹಾರ ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣ ಹವಾಮಾನ?
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ.

ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ...

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?: ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?: ಸಿದ್ದರಾಮಯ್ಯ...

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...