ಚಹಲ್ ಗಿಂತ ಸಿರಾಜ್ ಬೆಸ್ಟ್ ಬೌಲರ್ ಎಂದು ಸಾಬೀತು!

Date:

ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳು ಇಂಗ್ಲೆಂಡ್ ಅಥವಾ ಯುಎಇಯಲ್ಲಿ ನಡೆಯಲಿವೆ ಎಂಬ ಸುದ್ದಿ ಹರಿದಾಡುತ್ತಿದೆ.

 

ಈ ಸಂದರ್ಭದಲ್ಲಿ ಐಪಿಎಲ್ ಇತಿಹಾಸದ ಕೆಲ ದಾಖಲೆಗಳು ಮತ್ತು ಕೆಟ್ಟ ದಾಖಲೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೀಗೆ ಚರ್ಚಿಸಲ್ಪಡುತ್ತಿರುವ ದಾಖಲೆಗಳಲ್ಲಿ 2018ರಿಂದ ಇಲ್ಲಿಯವರೆಗೂ ಐಪಿಎಲ್ ಟೂರ್ನಿಗಳಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿಕೊಂಡಿರುವ ಬೌಲರ್ ಯಾರು ಎಂಬ ಕೆಟ್ಟ ದಾಖಲೆಯೂ ಕೂಡ ಒಂದು. 2018ರಿಂದ ಐಪಿಎಲ್ ಟೂರ್ನಿಗಳಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿಕೊಂಡಿರುವ ಬೌಲರ್‌ಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುಜ್ವೇಂದ್ರ ಚಾಹಲ್ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

 

2018ರಿಂದ ಇಲ್ಲಿಯವರೆಗೂ ಚಹಾಲ್ 64 ಸಿಕ್ಸರ್ ಬಾರಿಸಿಕೊಂಡಿದ್ದರೆ ಉಳಿದಂತೆ ಜಯದೇವ್ ಉನಾದ್ಕತ್ 57, ಶ್ರೇಯಸ್ ಗೋಪಾಲ್ 56, ರವಿಚಂದ್ರನ್ ಅಶ್ವಿನ್ 53, ಸುನಿಲ್ ನರೇನ್ 53, ಮೊಹಮ್ಮದ್ ಶಮಿ 51, ಶಾರ್ದೂಲ್ ಠಾಕೂರ್ 50 ಹಾಗೂ ಮೊಹಮ್ಮದ್ ಸಿರಾಜ್ 50 ಸಿಕ್ಸರ್‌ಗಳನ್ನು ಬಾರಿಸಿಕೊಂಡಿದ್ದಾರೆ. ಈ ಅಂಕಿ ಅಂಶಗಳನ್ನು ಗಮನಿಸಿದರೆ ಹೆಚ್ಚು ರನ್ ನೀಡಿದ್ದ ಕಾರಣಕ್ಕೆ ಅತಿಯಾಗಿ ಟ್ರೋಲ್ ಆಗಿದ್ದ ಮೊಹಮ್ಮದ್ ಸಿರಾಜ್ ಯುಜ್ವೇಂದ್ರ ಚಹಾಲ್‌ಗಿಂತ ಉತ್ತಮ ಎನಿಸುತ್ತದೆ.

 

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...