ಚಾಕುವಿನಿಂದ ಇರಿದು ಸರ್ಕಾರಿ ಅಧಿಕಾರಿ ಹತ್ಯೆ..!

Date:

ಬೆಂಗಳೂರು: ಚಾಕು ಇರಿದು ಉಪ ನಿರ್ದೇಶಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ. ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ಮೃತ ಸರ್ಕಾರಿ ಅಧಿಕಾರಿ. ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ ರಾತ್ರಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.


ಭಾನುವಾರ ಬೆಳಗ್ಗೆ ಪ್ರತಿಮಾ ಅವರ ಸಹೋದರ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆ ಬಳಿ ತೆರಳಿದಾಗ ಕೊಲೆಯಾದ ವಿಚಾರ ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶನಿವಾರ ರಾತ್ರಿ 8 ಗಂಟೆಗೆ ಪ್ರತಿಮಾ ಅವರನ್ನು ಕಾರು ಚಾಲಕ ನಿವಾಸಕ್ಕೆ ತಂದು ಬಿಟ್ಟಿದ್ದಾನೆ. ಪ್ರತಿಮಾ ಬೆಂಗಳೂರಿನಲ್ಲಿ ಒಬ್ಬರೇ ವಾಸವಾಗಿದ್ದು, ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದಾರೆ. ಪ್ರತಿಮಾ ಅವರ ಜೊತೆ ಮನೆಯಲ್ಲಿ ನಿನ್ನೆ ಯಾರಿದ್ದರು? ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಈ ವಿಚಾರಗಳು ಇನ್ನಷ್ಟೇ ತಿಳಿಯಬೇಕಿದೆ.

Share post:

Subscribe

spot_imgspot_img

Popular

More like this
Related

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ...

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...