ಚಾಮರಾಜನಗರ ಆಕ್ಸಿಜನ್ ದುರಂತ ; ಡಿಸಿಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಹೇಳಿದ್ದೇನು?

Date:

ಚಾಮರಾಜನಗರ: ಆಕ್ಸಿಜನ್ ಖಾಲಿಯಾಗಿ ಚಾಮರಾಜನಗರ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗೆ ಕರೆ ಮಾಡಿದ ಬಿಎಸ್‌ವೈ ದುರಂತ ಹಾಗೂ ಅದಕ್ಕೆ ಕಾರಣ ಕುರಿತಾಗಿ ವಿವರಗಳನ್ನು ಪಡೆದುಕೊಂಡರು.


ಚಾಮರಾಜನಗರ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ ರಾತ್ರಿ ಆಕ್ಸಿಜನ್‌ ಖಾಲಿ ಆದ ಕಾರಣದಿಂದಾಗಿ 23 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ ಈ ದುರ್ಘಟನೆ ನಡೆದಿದ್ದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಮರಾಜ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯರಾತ್ರಿ ಆಕ್ಸಿಜನ್‌ ಖಾಲಿಯಾಗಿದ್ದು, ಈ ಹಿನ್ನೆಲೆ ವೆಂಟಿಲೇಟರ್‌ನಲ್ಲಿದ್ದ ಹನ್ನೆರಡು ಜನ ಕೊರೊನಾ ರೋಗಿಗಳು ಮೃತಪಟ್ಟಿದ್ದಾರೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ಆರು ಸಾವಿರ ಲೀಟರ್‌ ಆಕ್ಸಿಜನ್‌ ಘಟಕ ಸ್ಥಾಪನೆಯಾಗಿದೆಯಾದರೂ ಅದಕ್ಕೆ ಆಕ್ಸಿಜನ್‌ ಪೂರೈಕೆ ಆಗಿರಲಿಲ್ಲ. ಭಾನುವಾರ ಮಧ್ಯರಾತ್ರಿ ಅದರಲ್ಲಿದ್ದ ಆಕ್ಸಿಜನ್‌ ಮುಗಿದಿದೆ. ಹೀಗಾಗಿ ವೆಂಟಿಲೇಟರ್‌ನಲ್ಲಿದ್ದ ಹನ್ನೆರಡು ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...