ಚಾರ್ಮಾಡಿ ಘಾಟ್ ಸಂಚಾರಿಗಳಿಗೆ ಗುಡ್ ನ್ಯೂಸ್

Date:

ಕಳೆದ ಒಂದು ತಿಂಗಳಿನಿಂದ ವಾಹನ ಸಂಚಾರ ಸ್ಥಗಿತವಾಗಿದ್ದ ಶಿರಾಡಿ ಘಾಟ್‌ನಲ್ಲಿ ಮತ್ತೆ ವಾಹನ ಸಂಚಾರ ಆರಂಭವಾಗಿದೆ. ಜುಲೈನಲ್ಲಿ ಸುರಿದ ಭಾರೀ ಮಳೆಗೆ ಶಿರಾಡಿ ಘಾಟ್‌ನ ದೋಣಿಗಲ್ ಎಂಬಲ್ಲಿ ಹೆದ್ದಾರಿ ಕುಸಿತವಾಗಿದ್ದು, ಎಲ್ಲಾ ರೀತಿಯ ವಾಹನ ಸಂಚಾರ ನಿರ್ಬಂಧವಾಗಿತ್ತು. ಇದೀಗ ಹೆದ್ದಾರಿ ದುರಸ್ಥಿ ಕಾರ್ಯ ನಡೆದಿದ್ದು, ಕೆಲ ನಿಯಮಗಳ ಅನುಸಾರವಾಗಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಆಗಸ್ಟ್ 16ರಿಂದ ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರಮುಖವಾಗಿ ‌ಕಾರು, ಜೀಪು, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಆ್ಯಂಬುಲೆನ್ಸ್ ಮತ್ತು ಬಸ್‌ಗಳು ಮತ್ತು 20 ಟನ್ ಸಾಮರ್ಥ್ಯದ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್‌ನಲ್ಲಿ ಅವಕಾಶ ಮಾಡಿಕೊಡಲಾಗಿದೆ.

 

ಆದರೆ ಬುಲೆಟ್ ಟ್ಯಾಂಕರ್, ಕಂಟೇನರ್ ಲಾರಿ ಸೇರಿದಂತೆ ಬೃಹತ್ ವಾಹನಗಳಿಗೆ ಸಂಚಾರಕ್ಕೆ ಇನ್ನೂ ಅವಕಾಶವನ್ನು ನೀಡಿಲ್ಲ. ರಸ್ತೆ ಸಂಚಾರ ಆರಂಭಕ್ಕೂ ಮುನ್ನ ಶಾಸಕರು, ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಸಕಲೇಶಪುರ ಶಾಸಕ ಎಚ್.ಕೆ. ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿ ಪ್ರತೀಕ್ ಬಯಾಲ್, ಜಿಲ್ಲಾಧಿಕಾರಿ ಆರ್. ಗಿರೀಶ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

 

ಅಧಿಕಾರಿಗಳ ಪರಿಶೀಲನೆ ಬಳಿಕ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ರಾತ್ರಿಯೇ ಆಗಸ್ಟ್ 16 ಬೆಳಗ್ಗಿನಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಆರಂಭ ಅಂತಾ ಸುದ್ದಿ ಹಬ್ಬಿದ್ದರಿಂದ ಬೆಳಗ್ಗಿನಿಂದಲೇ ದೋಣಿಗಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಟ್ರಾಫಿಕ್ ಜಾಮ್ ಉಂಟಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...