ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾ ಇಂದು ತೆರೆ ಕಂಡಿದೆ ರಾಜ್ಯಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ತೆರೆಕಂಡ ಒಡೆಯ ಸಂದೇಶ್ ನಾಗರಾಜ್ ನಿರ್ಮಾಣ ಮಾಡಿರುವ ಚಿತ್ರ, ಎಂ.ಡಿ. ಶ್ರೀಧರ್ ನಿರ್ದೇಶಿಸಿದ್ದಾರೆ. ಬಹುದೊಡ್ಡ ತಾರಾಗಣದಲ್ಲಿ ಹೈ ಬಜೆಟ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು ಈಗಾಗಲೇ ಎಲ್ಲೆಡೆ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಈ ಸಿನಿಮಾ ಪಕ್ಕಾ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಈ ಸಿನಿಮಾ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ದಾಖಲೆಯನ್ನು ಬರೆಯಲಿದೆ ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ .
ಸಿನಿಮಾದಲ್ಲಿ ಚಿಕ್ಕಣ್ಣ ಹಾಗೂ ಸಾಧುಕೋಕಿಲ ಅವರ ಕಾಮಿಡಿ ದೃಶ್ಯಗಳು ಪ್ರೇಕ್ಷಕರ ಮನಗೆದ್ದಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ಸನಾ ತಿಮ್ಮಯ್ಯ ಅಭಿನಯಿಸಿದ್ದಾರೆ. ಸನಾ ತಿಮ್ಮಯ್ಯ ಅವರ ಮೊದಲ ಚಿತ್ರ ಇದಾದರೂ ಅವರ ಅಭಿನಯಕ್ಕೆ ಪ್ರೇಕ್ಷಕ ಮನಸೋತಿದ್ದೇನೆ .