ಚಿಕ್ಕಮಗಳೂರಿನಲ್ಲಿ ವಿವಿಧ ಕೆಲಸ ಖಾಲಿ ಇವೆ; ಅರ್ಜಿ ಸಲ್ಲಿಸಿ

Date:

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಖಾಲಿ ಇರುವ, ಹೊಸದಾಗಿ ಮಂಜೂರಾದ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಜುಲೈ 19ರ ತನಕ ಅರ್ಜಿ ಸಲ್ಲಿಸಬಹುದು.
ಹೊರಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಬೆಳಗ್ಗೆ 10 ರಿಂದ ಸಂಜೆ 5.30ರ ತನಕ ಮಾತ್ರ ಅರ್ಜಿ ಸಲ್ಲಿಸಬೇಕು. ಸರ್ಕಾರಿ ರಜೆ ದಿನದಲ್ಲಿ ಅರ್ಜಿ ಸ್ವೀಕೃತವಾಗುವುದಿಲ್ಲ.


ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವೇತನ 24,000 ಪ್ರಯಾಣ ಭತ್ಯೆ 1500 ಮೀರದಂತೆ. ತಾಂತ್ರಿಕ ಸಹಾಯಕರ ಹುದ್ದೆ (ಸಿವಿಲ್). 45 ವರ್ಷದ ವೇತನ ನಿಗದಿ ಮಾಡಲಾಗಿದೆ.
ತಾಂತ್ರಿಕ ಸಂಯೋಜಕರ ಹುದ್ದೆಯನ್ನು ಸಹ ಭರ್ತಿ ಮಾಡಲಾಗುತ್ತಿದೆ. ವೇತನ 29,000 ರೂ. ಮತ್ತು ಗರಿಷ್ಠ ಮಾಸಿಕ 1500 ರೂ. ಮೀರದಂತೆ ಪ್ರಯಾಣ ಭತ್ಯೆ. ಹುದ್ದೆಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಯ್ಕೆಯಾದ ಅಭ್ಯರ್ಥಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಅವಧಿ 11 ತಿಂಗಳು. ಕಾರ್ಯಕ್ಷಮತೆ ನೋಡಿಕೊಂಡು, ಮುಂದುವರೆಸುವ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23602667
ಅಭ್ಯರ್ಥಿಗಳು ಅರ್ಜಿ, ವಿದ್ಯಾರ್ಹತೆ ವಿವರ ಮುಂತಾದ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಿ

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...