No menu items!
15 C
Munich
Saturday, June 13, 2026

ಚಿಕ್ಕಮಗಳೂರು: ಹಸುವಿನ ಕೆಚ್ಚಲು ಕತ್ತರಿಸಿದ ವಿಕೃತಿ ಮೆರೆದ ಕಿಡಿಗೇಡಿಗಳು

Must read

ಚಿಕ್ಕಮಗಳೂರು: ಹಸುವಿನ ಕೆಚ್ಚಲು ಕತ್ತರಿಸಿದ ವಿಕೃತಿ ಮೆರೆದ ಕಿಡಿಗೇಡಿಗಳು

ಚಿಕ್ಕಮಗಳೂರು ಛೇ.. ಇದೆಂಥಾ ವಿಕೃತಿ. ಅಸಲಿ ದೃಶ್ಯವನ್ನ ನಾವು ತೋರಿಸೋಕೆ ಆಗಲ್ಲ. ಯಾಕಂದ್ರೆ ಅಂತಹ ಕ್ರೂರ ದೃಶ್ಯ ನೋಡಿದ್ರೆ ಎಂತಹವರ ಕರುಳು ಚುರ್ ಅನ್ನುತ್ತೆ. ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆಯಲಾಗಿದೆ.
ಹೌದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಶೇಖರಪ್ಪ ಎಂಬುವವರಿಗೆ ಸೇರಿದ ಹಸುವನ್ನು ರಾತ್ರೋರಾತ್ರಿ ಹಸು ಕಳವು ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ, ಕಳ್ಳತನ ಯತ್ನ ವಿಫಲವಾದಾಗ ರೋಷದಿಂದ ಹಸುವಿನ ಕೆಚ್ಚಲು ಕತ್ತರಿಸಿ ಕಳ್ಳರು ಪರಾರಿಯಾಗಿದ್ದಾರೆ. ಪರಿಣಾಮವಾಗಿ ಹಸು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ.
ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಿರಂತರವಾಗಿ ಜಾನುವಾರುಗಳ ಕಳ್ಳತನ ಮಾಡಲಾಗುತ್ತಿದೆ. ಆದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -spot_img

More articles

- Advertisement -spot_img

Latest article