No menu items!
26.4 C
Munich
Sunday, June 21, 2026

ಚಿತ್ರದುರ್ಗದಲ್ಲಿ ಲಾರಿ ಅಪಘಾತ: ಮೂವರು ಸಾವು

Must read

ಚಿತ್ರದುರ್ಗದಲ್ಲಿ ಲಾರಿ ಅಪಘಾತ: ಮೂವರು ಸಾವು
ಚಿತ್ರದುರ್ಗ: ಇಲ್ಲಿನ ಕಲ್ಕುಂಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ ದಾವಣಗೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಮತ್ತೊಂದು ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ತೀವ್ರತೆಗೆ ಒಂದು ಲಾರಿ ಡಿವೈಡರ್ ದಾಟಿ ಎದುರು ಬದಿಗೆ ಹೋಗಿ ಇನ್ನೊಂದು ಲಾರಿಗೆ ಅಪ್ಪಳಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article