ಚಿತ್ರಾಲ್ ಗೆ ಚಿತ್ರಹಿಂಸೆ ಕೊಟ್ಟಿದ್ನಾ ರೇಣುಕಾಸ್ವಾಮಿ ?

Date:

ರೇಣುಕಾಸ್ವಾಮಿ ಕೊಲೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗ ಡಿ ಬಾಸ್ ದರ್ಶನ್‌ 14 ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನೂ ಇದೇ ಸಂದರ್ಭದಲ್ಲಿ ಕಿರುತೆರೆ ನಟಿ ಬಿಗ್ ಬಾಸ್ ವಿವಾದದ ರುವಾರಿ ಅಂತಾ ಗುರುತಿಸಲ್ಪಡುವ ಚಿತ್ರಾಲ್ ಈಗ ಇದೇ ವಿಚಾರ ಮಾತನಾಡಿದ್ದಾರೆ. ಹೌದು, ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು ಎಂಬುದು ಕೆಲವರ ವಾದ.

ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೊ ಶೇರ್‌ ಮಾಡಿ, ಅಕೌಂಟ್‌ ಫೋಟೊವನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

‌ʻʻಎಲ್ಲರಿಗೂ ನಮಸ್ಕಾರ, ಪಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾ ಸ್ವಾಮಿ ಅವರು ಈ ತರ ಹಲವರಿಗೆ ಮೆಸೆಜ್ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಲ್ಲಿ ಕಂಪ್ಲೇಟ್‌ ಕೂಡ ಆಗಿದೆ.

ಅವರ ಅಕೌಂಟ್‌ ಈ ರೀತಿ ಗೌತಮ್‌ ಅನ್ನುವ ಹೆಸರಲ್ಲಿ ಇತ್ತು. ಈ ಅಕೌಂಟ್ ಇಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಇನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು. ನಾನು ಅದರ ಸ್ಕ್ರೀನ್‌ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ. ಹಾಗಾಗಿ ಹಾಕಲಿಲ್ಲ ಚಿತ್ರಾಲ್ ವಿವರಿಸಿದ್ದಾರೆ

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...