ಬೆಂಗಳೂರು : ಚಿತ್ರ ನಿರ್ಮಾಪಕ, ವಿತರಕರ, ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ನಗರದ ಪೀಣ್ಯ ಬಸವೇಶ್ವರ ಬಸ್ ಟರ್ಮಿನಲ್ ಸಮೀಪವಿರುವ ತಮ್ಮ ಸುಪ್ರೀಂ ಹೋಟೆಲ್ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಹೋಟೆಲ್ಗೆ ತೆರಳಿದ್ದ ಅವರು, ಅಲ್ಲಿಯೇ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ಹೋಟೆಲ್ ಸಿಬ್ಬಂದಿ ಅವರನ್ನು ಎಬ್ಬಿಸಲು ಬಾಗಿಲು ತಟ್ಟಿದಾಗ ಅವರು ಬಾಗಿಲು ತೆಗೆದಿಲ್ಲ. ಆ ವೇಳೆ ಸಹಜವಾಗಿ ಅನುಮಾನಗೊಂಡು ಕಿಟಕಿ ಒಡೆದು ನೋಡಿದಾಗ ಮೋಹನ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಡಾ. ರಾಜ್ಕುಮಾರ್ ಕುಟುಂಬಕ್ಕೆ ಬಹಳ ಹತ್ತಿರದವರಾಗಿದ್ದ ಮೋಹನ್ ಸಿನಿಮಾ ನಿರ್ಮಾಣ, ವಿತರಣೆಯಲ್ಲಿ ತೊಡಗಿಕೊಂಡಿದ್ದರು. ಹೋಟೆಲ್ ಉದ್ಯಮವನ್ನೂ ನಡೆಸುತ್ತಿದ್ದರು. ಈ ಹಿಂದೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇವರು ಮೂಲತಃ ಉಡುಪಿ ಕುಂದಾಪುರದ ವಕ್ವಾಡಿಯವರಾಗಿದ್ದು, ಕೆಲವು ವರ್ಷಗಳಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಚಿತ್ರ ನಿರ್ಮಾಪಕ, ವಿತರಕ ಕಪಾಲಿ ಮೋಹನ್ ಆತ್ಮಹತ್ಯೆ
Date: