ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂಗೆ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರಿ ಮಾಡಿದೆ. ಒಂದು ಲಕ್ಷದ ಬಾಂಡ್ ಹಾಗೂ ಬಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಿದ್ದಾರೆ. ಜಾಮೀನು ಪಡೆದ ಕಾರ್ತಿ ಚಿದಂಬರಂ ಟ್ವಿಟ್ ಮಾಡಿದ್ದಾರೆ. ನಾವು ಇನ್ನಷ್ಟು ಗೆಲ್ಲುತ್ತೇವೆ ಎಂದಿದ್ದಾರೆ.
ಸದ್ಯ ಚಿದಂಬರಂ ಸಿಬಿಐ ವಶದಲ್ಲಿದ್ದಾರೆ. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಅವ್ರಿಗೆ ಜಾಮೀನು ಸಿಕ್ಕಿಲ್ಲ. ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ದೆಹಲಿ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು.