ಚಿನ್ನದ ದರದಲ್ಲಿ ಭಾರಿ ಇಳಿಕೆ!

Date:

ಮಾರ್ಚ್‌ ಆರಂಭದಿಂದಲೂ ಬಂಗಾರದ ಬೆಲೆಯಲ್ಲಿ ಗಣನೀಯ ಕುಸಿತ ಕಂಡಿದೆ. ಕಳೆದ ವಾರಪೂರ್ತಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ, ಈ ವಾರವೂ ಇಳಿಕೆಯ ಹಾದಿಯಲ್ಲೇ ಮುಂದುವರಿದಿದೆ. ಸೋಮವಾರ ಕೂಡ ಚಿನ್ನದ ಬೆಲೆ ಇಳಿಕೆಯಾಗಿದ್ದು, ಸಾವರ್ಕಾಲಿಕ ಗರಿಷ್ಠ ಮಟ್ಟಕ್ಕೆ ಹೋಲಿಸಿದರೆ ಬರೋಬ್ಬರಿ 11,500 ರೂಪಾಯಿ ಇಳಿಕೆಯಾಗಿದೆ. ಇದು ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದ್ದರೆ, ಚಿನ್ನಬೆಳ್ಳಿ ಮಾರುಕಟ್ಟೆಯಲ್ಲಿ ಒತ್ತಡಕ್ಕೆ ಕಾರಣವಾಗಿದೆ.

ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ ಆಫ್‌ ಇಂಡಿಯಾದಲ್ಲಿ ಸೋಮವಾರ ಕೂಡ ಶುದ್ಧ ಚಿನ್ನದ ಬೆಲೆಯಲ್ಲಿ ಶೇ.0.07ರಷ್ಟು ಇಳಿಕೆಯಾಗಿದ್ದು, ಪ್ರತಿ 10 ಗ್ರಾಂ ಅಪರಂಜಿ ಚಿನ್ನದ ಬೆಲೆ ₹44,653ಕ್ಕೆ ಇಳಿದಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಶೇ.1.3ರಷ್ಟು ಏರಿಕೆಯಾಗಿದ್ದು, 1 ಕೆಜಿ ಬೆಳ್ಳಿಯ ಬೆಲೆ ₹66,465ಕ್ಕೆ ನಿಗದಿಯಾಗಿದೆ.

2021ರ ಆರಂಭದಲ್ಲಿದ್ದ ಬೆಲೆಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ 5000 ರೂಪಾಯಿ ಇಳಿಕೆಯಾಗಿದೆ. ಕಳೆದ ಜನವರಿಯಯಲ್ಲಿ ಚಿನ್ನದ ಬೆಲೆ 48,500 ರೂಪಾಯಿ ಇತ್ತು. ಸಾರ್ವಕಾಲಿಕ ಗರಿಷ್ಠ ಬೆಲೆಗೆ ಹೋಲಿಸಿದರೆ ಇದೀಗ ಶೇ. 20ರಷ್ಟು ಬೆಲೆ ಇಳಿಕೆಯಾಗಿದೆ.

2020ರಲ್ಲಿ ಗಗನಮುಖಿಯಾಗಿದ್ದ ಚಿನ್ನ -ಬೆಳ್ಳಿ ದರಗಳು 2021ರ ಆರಂಭದಿಂದಲೂ ಇಳಿಕೆಯ ಹಾದಿ ಹಿಡಿದಿವೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಲೆಯಾಗಿದ್ದು, ಗ್ರಾಹಕ ಮಾರುಕಟ್ಟೆಯಲ್ಲಿ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಮಂಗಳವಾರ ಮಹಾನಗರಗಳಲ್ಲಿ ಚಿನ್ನದ ದರ ಅಲ್ಪ ಮಟ್ಟದ ಏರಿಕೆ ಕಂಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಹೀಗಾಗಿ ಎಂಸಿಎಕ್ಸ್‌ನಲ್ಲಿ ಬೆಲೆ ಇಳಿಕೆಗೆ ಕಾರಣವಾಗಿದೆ. ಇತ್ತೀಚೆಗೆ ಅಮೆರಿಕದ ಷೇರುಮಾರುಕಟ್ಟೆಯಲ್ಲಿ ಉತ್ತಮ ಬೆಳವಣಿಗೆ ಕಂಡಿದೆ. ಡಾಲರ್‌ ಮೌಲ್ಯದಲ್ಲೂ ಏರಿಕೆ ಆಗಿರುವ ಕಾರಣ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ.

ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಭಾರೀ ಏರಿಳಿತ ಕಾಣುತ್ತಿದೆ. ಕಾರಣ ಷೇರು ಮಾರುಕಟ್ಟೆ ಅಸ್ಥಿರತೆ ಜತೆಗೆ ಡಾಲರ್ ಮೌಲ್ಯದಲ್ಲಿ ಆಗುತ್ತಿರುವ ಏರಿಳಿತಗಳೂ ಇದಕ್ಕೆ ಕಾರಣವಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುವ ಬೆಲೆ ಅಸ್ಥಿರತೆಗಳು ಭಾರತದ ಚಿನ್ನದ ಮಾರುಕಟ್ಟೆ ಮೇಲೂ ಪ್ರಭಾವ ಬೀರುತ್ತಿದೆ. ಚಿನ್ನದ ಬೆಲೆ ಇಳಿಕೆಯು ಈ ವಾರಪೂರ್ತಿ ಮುಂದುವರಿಯಬಹುದು ಎನ್ನುತ್ತಾರೆ ಮಾರುಕಟ್ಟೆ ತಜ್ಞರು.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...