ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪ್ರಸ್ತುತ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಭರವಸೆಯನ್ನು ಹುಟ್ಟುಹಾಕಿದ್ದರು. ಆರಂಭದಿಂದಲೂ ಯಾವುದೇ ಸೋಲುಗಳನ್ನು ಕಾಣದೇ ಯಶಸ್ವಿಯಾಗಿ ಪ್ರದರ್ಶನವನ್ನು ನೀಡುತ್ತಾ ಬಂದಿದ್ದ ಪಿವಿ ಸಿಂಧು ಇದೇ ಮೊದಲ ಬಾರಿಗೆ ಪ್ರಸ್ತುತ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಸೋಲುಂಡಿದ್ದಾರೆ.
ಚೀನಾ ದೇಶದ ಬ್ಯಾಡ್ಮಿಂಟನ್ ಆಟಗಾರ್ತಿ ತೈ ತ್ಸು ಸಿಂಗ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು 18-21 ಹಾಗೂ 12-21 ಸೆಟ್‌ಗಳ ಅಂತರದಲ್ಲಿ ಸೋಲುಂಡಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆಲ್ಲುವ ರೇಸ್‌ನಿಂದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಹೊರಬಿದ್ದಿದ್ದಾರೆ. ಚಿನ್ನದ ಪದಕದ ರೇಸ್‌ನಿಂದ ಹೊರಬಿದ್ದಿರುವ ಭಾರತದ ಪಿವಿ ಸಿಂಧು ಮುಂದಿನ ಪಂದ್ಯದಲ್ಲಿ ಚೀನಾದ ಹೆ ಬಿಂಗ್ ಜಿಯಾವೊ ವಿರುದ್ಧ ಕಂಚಿನ ಪದಕಕ್ಕಾಗಿ ಸೆಣಸಾಟ ನಡೆಸಲಿದ್ದಾರೆ .