ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ನಾಲ್ವರು ಬಲಿ: 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ದೊಡ್ಡ ದುರಂತ ಸಂಭವಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ ಓರ್ವ ಮಹಿಳೆ ಸೇರಿ ನಾಲ್ವರು ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.
ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.