ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಆರ್ ಸಿಬಿ ವಿರುದ್ಧ 3ನೇ ಎಫ್ ಐಆರ್ ದಾಖಲು
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿಯ ಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳ ಸಾವು ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದೆ. ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿದ ಬಳಿಕ ಎಚ್ಚೆತ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಕೆಎಸ್ಸಿಎ, ಆರ್ಸಿಬಿ ಹಾಗೂ ಡಿಎನ್ಎ ನೆಟ್ವರ್ಕ್ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದರು.
ಇದೀಗ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಕಂಪನಿ ವಿರುದ್ಧ ಮೂರನೇ ಎಫ್ಐಆರ್ ದಾಖಲಾಗಿದೆ. ಗಾಯಾಳು ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ನೀಡಿದ ದೂರು ಆಧಾರಸಿ, ಎಫ್ಐಆರ್ ದಾಖಲಾಗಿದೆ.
ಆರ್ಸಿಬಿಯ ಉಚಿತ ಟಿಕೆಟ್ ಜಾಹೀರಾತು ನೋಡಿ ಕ್ರೀಡಾಂಗಣಕ್ಕೆ ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂಬರ್ 6ರ ಬಳಿ ನೂಕುನುಗ್ಗಲು ಉಂಟಾಗಿತ್ತು. ನೂಕುನುಗ್ಗಲಿನಲ್ಲಿ ಬಲಗಾಲಿನ ಮೇಲೆ ಬ್ಯಾರಿಕೇಡ್ ಬಿದ್ದಿತ್ತು. ಇದರಿಂದ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.