ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ

Date:

ಚಿನ್ನ ಖರೀದಿಸಬೇಕು ಅಂದುಕೊಂಡಿದ್ದಾಗ ಬೆಲೆ ಕೊಂಚ ಪ್ರಮಾಣದಲ್ಲಿಯಾದರೂ ಇಳಿಕೆ ಕಾಣಬೇಕು ಎಂದು ಬಯಸುವುದು ತಪ್ಪೇನಲ್ಲ. 

ಹೆಚ್ಚಿನ ಹಣ ಕೊಟ್ಟು ಚಿನ್ನಾಭರಣ ಖರೀದಿಸಲು ಹೊರಟಾಗ ಇಂದಿನ ದರ ಎಷ್ಟಿದೆ? ಎಂಬ ಕುತೂಹಲ ಇರುವುದು ಸರ್ವೇ ಸಾಮಾನ್ಯ. ಮನೆಯಲ್ಲಿ ಮದುವೆ ಸಮಾರಂಭಗಳು ಎದುರಿಗಿದ್ದಾಗ ಚಿನ್ನ (Gold Price), ಬೆಳ್ಳಿ (Silver Price) ಸಾಮಗ್ರಿಗಳನ್ನು ಮತ್ತು ಅಭರಣಗಳನ್ನು ಖರೀದಿಸುವ ಪ್ಲ್ಯಾನ್ ಮಾಡಿದ್ದರೆ ಇಂದು ಬುಧವಾರ (ಡಿಸೆಂಬರ್ 1) ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,930 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 61,900 ರೂಪಾಯಿ ದಾಖಲಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ಸುಮಾರು 2,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,600 ರೂಪಾಯಿ ನಿಗದಿಯಾಗಿದೆ. ಸುಮಾರು 2450 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 66,500 ರೂಪಾಯಿ ನಿಗದಿಯಾಗಿದೆ. ಸುಮಾರು 1,100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,930 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 66,500 ರೂಪಾಯಿ ನಿಗದಿಯಾಗಿದೆ. ಸುಮಾರು 1,100 ರೂಪಾಯಿಯಷ್ಟು ಇಳಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,200 ರೂಪಾಯಿ ನಿಗದಿಯಾಗಿದೆ. ಸುಮಾರು 1,900 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,200 ರೂಪಾಯಿ ನಿಗದಿಯಾಗಿದೆ. ಸುಮಾರು 1,900 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 61,900 ರೂಪಾಯಿ ನಿಗದಿಯಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...