ಸಿಎಂ ಬಿಎಸ್‌ವೈ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಅಭ್ಯರ್ಥಿಯೊಬ್ಬರ ನಾಮಪತ್ರ ಹಿಂಪಡೆಯಲು ಒತ್ತಡ ಹೇರಿರುವುದು ಬಹಿರಂಗವಾಗಿದೆ. ಈ ಬಗ್ಗೆ ಆಯೋಗ ಏನು ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಶ್ನಿಸಿದರು.
ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾಲ್ಕೈದು ಕ್ಷೇತ್ರಗಳಲ್ಲಿ ಒತ್ತಡ ತಂತ್ರವನ್ನು ಬಿಜೆಪಿ ಅನುಸರಿಸುತ್ತಿದೆ. ಆದರೆ, ಚುನಾವಣಾ ಆಯೋಗ ಜೀವಂತ ಇದೆಯೋ, ಸತ್ತು ಹೋಗಿದೆಯೋ ಅಥವಾ ಬಿಜೆಪಿಯೊಂದಿಗೆ ಶಾಮೀಲಾಗಿದೆಯೋ ಎಂಬ ಸಂಶಯ ಸೃಷ್ಟಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.