No menu items!
14.6 C
Munich
Tuesday, May 5, 2026

ಚುನಾವಣಾ ಫಲಿತಾಂಶ ಹಿನ್ನಲೆ: ಇಂಡಿಯಾ ಒಕ್ಕೂಟ ಸಭೆ ಕರೆದ ಕಾಂಗ್ರೆಸ್

Must read

ನವದೆಹಲಿ: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈ ನಡುವೆ ಡಿಸೆಂಬರ್ 6 ರಂದು INDIA ಮೈತ್ರಿಕೂಟದ ನಾಯಕರ ಸಭೆ ಕರೆಯಲಾಗಿದೆ. ಡಿಸೆಂಬರ್ 6 ರಂದು ಮುಂದಿನ ಭಾರತ ಮೈತ್ರಿ ಸಭೆಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲಾಗುವುದು ಎಂದು ಮೈತ್ರಿ ಸದಸ್ಯರಿಗೆ ತಿಳಿಸಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇನ್ನು ಮಿಜೋರಾಂ ರಾಜ್ಯದ ಚುನಾವಣಾ ಫಲಿತಾಂಶವು ಸೋಮವಾರ ಪ್ರಕಟವಾಗಲಿದೆ.

- Advertisement -spot_img

More articles

- Advertisement -spot_img

Latest article