ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವರೂ ಆಗಿರುವ ಅಮಿತ್ ಶಾ ಅವರಿಗೆ ಬಿಜೆಪಿ ಪಕ್ಷ 2019ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿಯಾಗಿ ಜಯಗಳಿಸಿದ್ದರೂ ಸಹ ದೇಶದ ಕೆಲವು ರಾಜ್ಯಗಳಲ್ಲಿನ ಪಕ್ಷದ ಸಾಧನೆ ಬಗ್ಗೆ ಇನ್ನೂ ಕೂಡಾ ತೀವ್ರವಾದ ಅಸಮಧಾನ ಇರುವುದು ಮತ್ತೊಮ್ಮೆ ಸಾಬೀತಾಗಿದೆ.
ಇದರಿಂದಾಗಿ ಕೇರಳ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಪಕ್ಷದ ಸಂಘಟನೆ ಕೆಲಸವನ್ನು ವಿಸ್ತರಣೆ ಮಾಡುವಂತೆ ಗೃಹ ಸಚಿವ ಅಮಿತ್ ಶಾ ಪಕ್ಷದ ಸಂಘಟಕರಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಪಕ್ಷದ ಸಂಘಟನಾ ನಾಯಕರು, ರಾಜ್ಯ ಘಟಕದ ಮುಖ್ಯಸ್ಥರು ಮತ್ತು ಪ್ರಭಾರಿಗಳೊಂದಿಗೆ ಸಭೆ ನಡೆಸಿದ ಅಮಿತ್ ಶಾ ಅವರು ಹೊಸ ಸದಸ್ಯತ್ವ ನೋಂದಣಿ ಕಾರ್ಯವನ್ನು ಚುರುಕು ಮಾಡಿ ಎಂದು ಸಲಹೆ ನೀಡಿದ್ದಾರೆ.
ಇತ್ತೀಚೆಗೆ ಪಶ್ಚಿಮ ಬಂಗಾಳ, ತೆಲಂಗಾಣಗಳಂತಹ ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಬಲಗೊಂಡಿದೆ ಇದೇ ರೀತಿ ಮುಂದಿನ ವರ್ಷಗಳಲ್ಲಿ ಈ ಎಲ್ಲಾ ರಾಜ್ಯಗಳಲ್ಲಿಯೂ ಪಕ್ಷವನ್ನು ವಿಸ್ತರಿಸಬೇಕು ಅದರ ಸಲುವಾಗಿ ಎಲ್ಲರು ಶ್ರಮವನ್ನು ವಹಿಸಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.