ನಾರಾಯಣಗೌಡರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣೆಗೆ ಮೊದಲೇ ಹಲವು ನಾಟಕಗಳು ನಡೆಯುತ್ತಿವೆ. ಇನ್ನು ಫಲಿತಾಂಶ ಬಂದ ನಂತರ ಇನ್ನೂ ಹೊಸ ನಾಟಕಗಳು ಪ್ರಾರಂಭವಾಗಲಿವೆ ಎಂದು ಮಾರ್ಮಿಕವಾಗಿ ನುಡಿದರು.
ಇನ್ನೆರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವುದಾಗಿ ಎಚ್‍ಡಿಕೆ ತಿಳಿಸಿದರು. ಉಪಚುನಾವಣೆ ನಡೆದೆ ನಡೆಯುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಕಿಲ್ಲ ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಎಚ್‍ಡಿಕೆ 15 ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನದಲ್ಲಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.