ಚೆನ್ನೈ ವಿರುದ್ಧ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರ ಯಾರು ಗೊತ್ತಾ?

Date:

ಚೆನ್ನೈ ವಿರುದ್ಧ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರ ಯಾರು ಗೊತ್ತಾ?

 

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕಳೆದ ಶುಕ್ರವಾರ (ಏಪ್ರಿಲ್ 9) ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಸೆಣಸಾಟ ನಡೆದು ಬೆಂಗಳೂರು ತಂಡ ರೋಚಕ ಜಯ ಸಾಧಿಸಿತು. ಏಪ್ರಿಲ್ 10ರಂದು ನಡೆದ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಕಾದಾಟ ನಡೆದು ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್‍ಗಳ ನಷ್ಟಕ್ಕೆ 188 ರನ್ ಗಳಿಸಿತು. 189 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಪೃಥ್ವಿ ಶಾ ಮತ್ತು ಶಿಖರ್ ಧವನ್ ಭರ್ಜರಿ ಇನ್ನಿಂಗ್ಸ್ ಕಟ್ಟಿಕೊಟ್ಟರು. 138 ರನ್‌ಗಳ ಜತೆಯಾಟವಾಡಿದ ಈ ಜೋಡಿ ಗೆಲುವಿನಲ್ಲಿ ದೊಡ್ಡ ಪಾತ್ರ ವಹಿಸಿತು. ಪೃಥ್ವಿ ಶಾ 38 ಎಸೆತಗಳಲ್ಲಿ 72 ರನ್ ಬಾರಿಸಿದರೆ ಶಿಖರ್ ಧವನ್ 54 ಎಸೆತಗಳಲ್ಲಿ 85 ರನ್ ಬಾರಿಸಿದರು. ಈ ಮೂಲಕ ಶಿಖರ್ ಧವನ್ ವಿರಾಟ್ ಕೊಹ್ಲಿಯನ್ನು ಸರಿಗಟ್ಟಿ ಹೊಸದೊಂದು ದಾಖಲೆಯನ್ನು ನಿರ್ಮಿಸಿದ್ದಾರೆ.

 

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಶಿಖರ್ ಧವನ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶಿಖರ್ ಧವನ್ ಅವರು ಇದುವರೆಗೂ ಗಳಿಸಿರುವುದು 910 ರನ್. ಶಿಖರ್ ಧವನ್ ಹೊರತುಪಡಿಸಿದರೆ ಚೆನ್ನೈ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ ದಾಖಲೆಯಲ್ಲಿ ವಿರಾಟ್ ಕೊಹ್ಲಿ 901 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಚೆನ್ನೈ ವಿರುದ್ಧ 749 ರನ್ ಗಳಿಸಿರುವ ರೋಹಿತ್ ಶರ್ಮಾ ಮೂರು, 617 ರನ್ ಗಳಿಸಿರುವ ಡೇವಿಡ್ ವಾರ್ನರ್‌ ನಾಲ್ಕು ಮತ್ತು 593 ರನ್ ಗಳಿಸಿರುವ ಎಬಿಡಿ ಐದನೇ ಸ್ಥಾನಗಳಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...