ಚೆನ್ನೈ ವಿರುದ್ಧ ತನ್ನ ಕೆಟ್ಟ ದಾಖಲೆಯನ್ನು ಮುಂದುವರಿಸಿದ ರಾಜಸ್ಥಾನ್ ರಾಯಲ್ಸ್

Date:

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 12ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಿದವು. ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಕಂಡಿತ್ತು. ತದನಂತರ ನಡೆದ 2 ಪಂದ್ಯಗಳಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದು ಬೀಗಿದ್ದು ಯಶಸ್ಸಿನ ಹಾದಿಗೆ ಮರಳಿದೆ.

ಸೋಮವಾರ (ಏಪ್ರಿಲ್ 19) ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡು ಪ್ಲೆಸಿಸ್, ಮೊಯಿನ್ ಅಲಿ, ರಾಯುಡು ಹಾಗೂ ಬ್ರಾವೊ ಅವರ ಜವಾಬ್ದಾರಿಯುತ ಆಟದಿಂದ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿತು. 189 ರನ್‌ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡದ ಪರ ಆರಂಭಿಕ ಆಟಗಾರನಾಗಿ ಬಂದ ಜೋಸ್ ಬಟ್ಲರ್ ಹೊರತುಪಡಿಸಿ ಬೇರೆ ಯಾವುದೇ ಆಟಗಾರರು ಸಹ ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ಯುವಂತಹ ಆಟವನ್ನು ಆಡಲಿಲ್ಲ. ಪಂದ್ಯದ ಕೊನೆಗೆ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ರಾಜಸ್ಥಾನ್ ರಾಯಲ್ಸ್ 143 ರನ್ ಗಳಿಸಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 45 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

 

ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲುವುದರ ಮೂಲಕ ರಾಜಸ್ಥಾನ್ ರಾಯಲ್ಸ್ ಚೆನ್ನೈ ತಂಡದ ವಿರುದ್ಧದ ತನ್ನ ಕೆಟ್ಟ ದಾಖಲೆಯೊಂದನ್ನು ಮುಂದುವರೆಸಿದೆ. ಹೌದು ಐಪಿಎಲ್ ಇತಿಹಾಸದಲ್ಲಿ ಚೆನ್ನೈ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ ಇದುವರೆಗೂ 180ಕ್ಕಿಂತ ಹೆಚ್ಚು ರನ್ ಗುರಿಯನ್ನು ಬೆನ್ನತ್ತಿಯೇ ಇಲ್ಲ. ಚೆನ್ನೈ ತಂಡ 180ಕ್ಕಿಂತ ಹೆಚ್ಚು ರನ್‌ಗಳ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿದಾಗಲೆಲ್ಲಾ ರಾಜಸ್ಥಾನ್ ತಂಡ ಸೋತಿದೆ. ಈ ಆವೃತ್ತಿಯ ಸೋಮವಾರ ನಡೆದ ಪಂದ್ಯದಲ್ಲಿಯೂ ಸಹ ಚೆನ್ನೈ 180+ ರನ್ ಟಾರ್ಗೆಟ್ ನೀಡಿತ್ತು ಆದರೆ ರಾಜಸ್ಥಾನ್ ರಾಯಲ್ಸ್ ಮತ್ತೊಮ್ಮೆ ಚೆನ್ನೈ ವಿರುದ್ಧ 180+ ರನ್ ಚೇಸ್ ಮಾಡುವಲ್ಲಿ ವಿಫಲವಾಗಿ ತನ್ನ ಹಳೆಯ ಕೆಟ್ಟ ದಾಖಲೆಯನ್ನು ಮುಂದುವರೆಸಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...