ಛತ್ತೀಸ್‌ʼಗಢದಲ್ಲಿ ಬಸ್‌ ಕಂದಕಕ್ಕೆ ಉರುಳಿ 12 ಮಂದಿ ಸಾವು

Date:

ರಾಯ್ಪುರ: ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ಘಟನೆ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದಿದೆ.
ಮಂಗಳವಾರ ರಾತ್ರಿ 8:30 ಕ್ಕೆ ಈ ಘಟನೆ ನಡೆದಿದ್ದು, ದುರ್ಗದಲ್ಲಿ ಕಾರ್ಮಿಕರೊಂದಿಗೆ ತುಂಬಿದ್ದ ಬಸ್ ಹಳ್ಳಕ್ಕೆ ಬಿದ್ದಿದ್ದರಿಂದ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದುರ್ಗದ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಮಾಹಿತಿ ನೀಡಿದ್ದಾರೆ.
ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ)ಗೆ ಕಳುಹಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಬಸ್ಸಿನೊಳಗೆ ಇನ್ನೂ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...