ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ

0 Min Read

ನವದೆಹಲಿ: ವೈ.ಎಸ್.ಜಗನ್‌ಮೋಹನ್ ರೆಡ್ಡಿ ಸಹೋದರಿ, ವೈಎಸ್‌ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್.ಶರ್ಮಿಳಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಕಾಂಗ್ರೆಸ್‌ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ ಸಮ್ಮುಖದಲ್ಲಿ ಸೇರ್ಪಡೆಯಾದರು.
ಸಹೋದರ ವೈಎಸ್ ಜಗನ್‌ಮೋಹನ್ ರೆಡ್ಡಿ ಜೊತೆಗೆ ಭಿನ್ನಾಭಿಪ್ರಾಯಗಳ ಬಳಿಕ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಟ್ಟಿದ್ದರು. ಇತ್ತಿಚೇಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು. ಈಗ ಅವರು ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾಗಿ ತಮ್ಮ‌ ಪಕ್ಷವನ್ನು ವಿಲೀನಗೊಳಿಸಿದ್ದಾರೆ.

Share This Article