ಜನರನ್ನು ಕೈಯೊಡ್ಡುವ ಸ್ಥಿತಿಗೆ ದೂಡಲಾಗಿದೆ: ಎಚ್.ಡಿ. ಕುಮಾರಸ್ವಾಮಿ ಬೇಸರ

Date:

ಜನರನ್ನು ಕೈಯೊಡ್ಡುವ ಸ್ಥಿತಿಗೆ ದೂಡಲಾಗಿದೆ: ಎಚ್.ಡಿ. ಕುಮಾರಸ್ವಾಮಿ ಬೇಸರ

ಚಿಕ್ಕನಾಯಕನಹಳ್ಳಿ: ರಾಜ್ಯದ ಜನರಿಗೆ ಇನ್ನೊಬ್ಬರಿಗೆ ಕೊಡುವ ಶಕ್ತಿಯನ್ನು ನೀಡಬೇಕಾಗಿತ್ತು. ಆದರೆ, ದಿನನಿತ್ಯ ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ  ಬೇಸರ ವ್ಯಕ್ತಪಡಿಸಿದರು.

ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು ತಮ್ಮ ಕ್ಷೇತ್ರದಲ್ಲಿ ನಡೆಸುತ್ತಿರುವ ‘ಜನಸ್ಪಂದನ’ ಕಾರ್ಯಕ್ರಮದ 100ನೇ ವಾರದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಜನರು ಬುದ್ಧಿವಂತರಾಗಬೇಕು. ಇನ್ನೊಬ್ಬರಿಗೆ ಕೊಡುವ ಶಕ್ತಿ ತಮಗೆ ಬರದೇ ಇರುವ ಬಗ್ಗೆ ಆಲೋಚನೆ ಮಾಡಬೇಕು. ಮಹಾತ್ಮ ಗಾಂಧೀಜಿ ಅವರ ರಾಮರಾಜ್ಯದ ಕನಸು ನನಸು ಎಂದರೆ ತಾವು ಕೈಚಾಚುವುದು ಅಲ್ಲ, ಇನ್ನೊಬ್ಬರಿಗೆ ಕೊಡುವ ಶಕ್ತಿ ಹೊಂದಿರುವುದು,” ಎಂದು ಅವರು ಹೇಳಿದರು. ಪರೋಕ್ಷವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

“ಕರ್ನಾಟಕ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ನಾನು ಹೇಳುವುದಿಲ್ಲ. ಆದರೆ, ಜನರನ್ನು ಶಾಶ್ವತವಾಗಿ ಆರ್ಥಿಕವಾಗಿ ಸಬಲರನ್ನಾಗಿಸಲು ರಾಜ್ಯದಲ್ಲೇ ಸಾಕಷ್ಟು ಸಂಪನ್ಮೂಲಗಳಿವೆ ಎಂಬುದನ್ನು ನಾನು ಹೇಳುತ್ತಿದ್ದೇನೆ,” ಎಂದರು.

“ಅಭಿವೃದ್ಧಿ ಪ್ರಚಾರದಲ್ಲಿ ಮಾತ್ರ ಕಾಣುತ್ತಿದೆ. ಕೇವಲ ಜಾಹೀರಾತುಗಳಲ್ಲಿ ಅಭಿವೃದ್ಧಿ ಕಾಣುತ್ತಿದೆ. ನೂರಾರು ಕೋಟಿ ರೂಪಾಯಿ ತೆರಿಗೆ ಹಣವನ್ನು ಜಾಹೀರಾತುಗಳಿಗೆ ಖರ್ಚು ಮಾಡಲಾಗುತ್ತಿದೆ. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾಗ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದೇನೆ. ಆದರೆ ಅದನ್ನು ಪ್ರಚಾರಕ್ಕೆ ಬಳಸಿಕೊಳ್ಳಲಿಲ್ಲ. ಈಗ ನೋಡಿದರೆ ಕೆಲಸಕ್ಕಿಂತ ಪ್ರಚಾರವೇ ಹೆಚ್ಚು,” ಎಂದು  ಟೀಕಿಸಿದರು.

Share post:

Subscribe

spot_imgspot_img

Popular

More like this
Related

ಗ್ರಾಮೀಣ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಗ್ರಾಮೀಣ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ ಬೆಂಗಳೂರು:...

ಸೌದಿ ಅರೇಬಿಯಾದಲ್ಲಿ JZ ಗ್ರೀನ್ ಹೆವನ್: ಐಷಾರಾಮಿ ವಾಸ್ತವ್ಯದ ಹೊಸ ಅಧ್ಯಾಯ

ಸೌದಿ ಅರೇಬಿಯಾದಲ್ಲಿ JZ ಗ್ರೀನ್ ಹೆವನ್: ಐಷಾರಾಮಿ ವಾಸ್ತವ್ಯದ ಹೊಸ ಅಧ್ಯಾಯ ರಿಯಾದ್:...

ಧಾರವಾಡ ಹೈಕೋರ್ಟ್ ಪೀಠ ಸೇರಿ ಮೂರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

ಧಾರವಾಡ ಹೈಕೋರ್ಟ್ ಪೀಠ ಸೇರಿ ಮೂರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಧಾರವಾಡ:...

ರಾಜ್ಯದಲ್ಲಿ ಮುಂದುವರಿದ ಒಣಹವೆ: ಬೆಂಗಳೂರಿನಲ್ಲಿ ಕನಿಷ್ಠ 17°C ದಾಖಲು

ರಾಜ್ಯದಲ್ಲಿ ಮುಂದುವರಿದ ಒಣಹವೆ: ಬೆಂಗಳೂರಿನಲ್ಲಿ ಕನಿಷ್ಠ 17°C ದಾಖಲು ಬೆಂಗಳೂರು: ಬೆಂಗಳೂರು ಸೇರಿದಂತೆ...