ಬೆಂಗಳೂರು: ಸಮಾಜದ ಎಲ್ಲಾ ವರ್ಗದ ಜನರಿಗೆ ಅನುಕೂಲ ಒದಗಿಸುವ ಉದ್ದೇಶದಿಂದ ರೈಲು ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲು ಚಿಂತಿಸಲಾಗಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಡ, ಮಧ್ಯಮ ವರ್ಗದ ಜನ ವಂದೇ ಭಾರತ್ ರೈಲಿನಲ್ಲಿ ಓಡಾಡುವಂತೆ ಟಿಕೆಟ್ ದರ ಪರಿಷ್ಕರಣೆ ಮಾಡುತ್ತೇವೆ. ರೈಲು ಟಿಕೆಟ್ ದರ ಪರಿಷ್ಕರಣೆ ಸಂಬಂಧ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.
ಇನ್ನೂ ಬೆಂಗಳೂರು ಜನ ಪ್ರತಿನಿಧಿಗಳು ಹಾಗೂ ರಾಜ್ಯ ರೈಲ್ವೆ ಇಲಾಖೆಯ ಮುಖ್ಯಸ್ಥರ ಜೊತೆಗೆ ಸಭೆ ಮಾಡಿದ್ದೇನೆ. ರೈಲ್ವೆ ಮಂತ್ರಿಗಳಾದ ಅಶ್ವಿನಿ ವೈಷ್ಣವ್ ಅವರ ಅನುಭವ ಇನ್ನಷ್ಟು ಹುಮ್ಮಸ್ಸು ಕೊಡುತ್ತಿದೆ. ರೈಲ್ವೆ ಇಲಾಖೆಯ ಕಾರ್ಯವೈಖರಿ ಒಂದು ರೀತಿಯ ಮಿಲಿಟರಿ ಇದ್ದಂತೆ. ದೇಶದಲ್ಲಿ ಮೊದಲು ಮಿಲಿಟರಿ ಪಡೆ ಆದರೆ, ಎರಡನೇ ಹಂತದಲ್ಲಿ ರೈಲ್ವೆ ಇಲಾಖೆ ಇದೆ. ಅದೇ ರೀತಿಯಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದಿದ್ದಾರೆ.
ಜನರಿಗೆ ಅನುಕೂಲವಾಗಲೂ ವಂದೇ ಭಾರತ್ ರೈಲಿನಲ್ಲಿ ದರ ಪರಿಷ್ಕರಣೆ ಮಾಡುತ್ತೇವೆ !
Date: