No menu items!
33 C
Munich
Friday, June 19, 2026

ಜನರಿಗೆ ಮತ್ತೊಂದು ಶಾಕ್: ನಂದಿನಿ ಹಾಲಿನ ದರ 4 ರೂ. ಏರಿಕೆ

Must read

ಜನರಿಗೆ ಮತ್ತೊಂದು ಶಾಕ್: ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ಚರ್ಚೆಯಾಗುತ್ತಿರುವ ಹಾಲಿನ ದರ ಹೆಚ್ಚಳ ಬಗ್ಗೆ ಇಂದು ಸಭೆಯಲ್ಲಿ ನಿರ್ಧಾರವಾಗಿದ್ದು, ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಯನ್ನು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನದ ಏರಿಕೆ ಮಾಡಿದಂತಾಗಿದೆ. ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್ಗೆ 2 ರೂ ಏರಿಕೆ ಮಾಡಲಾಗಿತ್ತು. ಆದ್ರೆ, ಇದೀಗ ಲೀಟರ್ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ.
ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 5ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದ್ರೆ ಇದೀಗ ಸಚಿವ ಸಂಪುಟ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.
ಯಾವ ಹಾಲಿನ ದರ ಎಷ್ಟಾಗಬಹುದು?
– ನೀಲಿ‌ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ
– ಆರೆಂಜ್ ಪ್ಯಾಕೆಟ್ ಹಾಲು – 54 ರೂ‌. ನಿಂದ 58 ರೂ.
– ಸಮೃದ್ಧಿ ಹಾಲಿನ‌ ಪ್ಯಾಕೆಟ್ 56 ರೂ. ನಿಂದ 60 ರೂ.
– ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ.
– ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ.

- Advertisement -spot_img

More articles

- Advertisement -spot_img

Latest article