ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ: ಡಿ.ಕೆ.ಶಿವಕುಮಾರ್
ಬೆಂಗಳೂರು: ಜನರ ಕಲ್ಯಾಣ ಕಾರ್ಯಕ್ರಮಗಳಿಗೆ 1 ಲಕ್ಷ ಕೋಟಿಯಷ್ಟು ಮೀಸಲಿಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜನರ ಹೊಟ್ಟೆ ತುಂಬಿಸಬೇಕು. ಬೆಲೆ ಏರಿಕೆ ಸಮಸ್ಯೆಯಿಂದ ಜನರನ್ನು ರಕ್ಷಿಸಬೇಕು ಎಂದು ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ.
ಪ್ರತಿ ವರ್ಷ ಇದಕ್ಕೆ 52 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದೇವೆ. ಇದರ ಜೊತೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲು ನಾವು ಪ್ರತಿ ವರ್ಷ 20 ಸಾವಿರ ಕೋಟಿ ನೀಡುತ್ತಿದ್ದೇವೆ. ಹೀಗೆ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ 1 ಲಕ್ಷ ಕೋಟಿಯಷ್ಟು ಮೀಸಲಿಡುತ್ತಿದ್ದೇವೆ” ಎಂದರು.
ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ನೀವೆಲ್ಲರೂ ಅದರಲ್ಲಿ ಭಾಗವಹಿಸಬೇಕು. ಇದು ಎಲ್ಲ ಸಮಾಜದ ಭವಿಷ್ಯಕ್ಕಾಗಿ ಮಾಡುತ್ತಿದ್ದೇವೆ. ನೀವು ಅಗತ್ಯವಾದ ಮಾಹಿತಿ ನೀಡಿ, ಅನಗತ್ಯ ಎನಿಸಿದ ಪ್ರಶ್ನೆಗಳನ್ನು ನಿರ್ಲಕ್ಷಿಸಿ” ಎಂದು ಹೇಳಿದರು.
ರಾಮಲಿಂಗಾ ರೆಡ್ಡಿ ಅವರ ಬಗ್ಗೆ ನೀವು ಅಪಾರ ವಿಶ್ವಾಸ ವ್ಯಕ್ತಪಡಿಸಿದ್ದೀರಿ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಹೆಚ್ಚು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂತಹ ಹಿರಿಯ ನಾಯಕರನ್ನು ಹೊಂದಿರುವುದು ನಿಮ್ಮ ಭಾಗ್ಯ. ನೀವು 8 ಬಾರಿ ಅವರನ್ನು ಆಯ್ಕೆ ಮಾಡಿದ್ದು, ಬೆಂಗಳೂರನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ನಮಗೆ ಮಾರ್ಗದರ್ಶನ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ” ಎಂದು ತಿಳಿಸಿದರು.