ನವದೆಹಲಿ: ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಹೌದು ಜನವರಿ 22ರಂದು ರಾಮನೂರಿನಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಈ ದಿನಕ್ಕಾಗಿ ದೇಶಾದ್ಯಂತ ಜನ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಅಲ್ಲದೆ ಈ ದಿನ ರಜೆ ನೀಡಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದವು. ಆದ್ದರಿಂದ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗುವುದು.
ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಕೂಡ ಭಾಗವಹಿಸಬೇಕು ಎಂಬ ಕಾರಣಕ್ಕೆ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಅರ್ಧ ರಜೆ ನೀಡಲಾಗುವುದು ಎಂದು ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಜನವರಿ 22 ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
Date: