ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ !

Date:

ಬೆಂಗಳೂರು: ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ. ಪ್ರತಿಯೊಂದು ಕುಟುಂಬದ ಹೆಣ್ಣುಮಕ್ಕಳು ನಮ್ಮ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಿದ್ದರೆ, ನಾವು ಜನರ ಬದುಕಿನ ಬಗ್ಗೆ ರಾಜಕಾರಣ ಮಾಡುತ್ತಿದ್ದೇವೆ.
ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ. ಪ್ರತಿಯೊಂದು ಕುಟುಂಬದ ಹೆಣ್ಣುಮಕ್ಕಳು ನಮ್ಮ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ನನ್ನ 40 ವರ್ಷಗಳ ರಾಜಕಾರಣದಲ್ಲಿ ಇಂತಹ ಅವಕಾಶ, ಭಾಗ್ಯ ದೊರಕಿರಲಿಲ್ಲ. ನುಡಿದಂತೆ ನಡೆದಿದ್ದೇವೆ, ಇದನ್ನು ಕಾರ್ಯಕರ್ತರು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.
ಈ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಈ ದೇಶದ ಇತಿಹಾಸ, ಅಭಿವೃದ್ಧಿ ಪರ್ವ ಬರೆದದ್ದು ನಮ್ಮ ಹೆಗ್ಗಳಿಕೆ. ಅನ್ಯರು ಏನು ಬೇಕಾದರೂ ಹೇಳಬಹುದು, ಆದರೆ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ಅದನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ದದ್ದು ಕಾಂಗ್ರೆಸ್. ನಿರ್ಲಕ್ಷಿತ ಸಮುದಾಯಕ್ಕೆ ಧ್ವನಿ, ವಿದ್ಯಾಭ್ಯಾಸ, ಆರ್ಥಿಕ ಶಕ್ತಿ ಕೊಟ್ಟದ್ದು, ಅಣೆಕಟ್ಟುಗಳ ನಿರ್ಮಾಣ ಸೇರಿದಂತೆ ದೇಶವನ್ನು ಅಭಿವೃದ್ದಿಶೀಲವನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...