No menu items!
18.2 C
Munich
Tuesday, April 28, 2026

ಜಮೀರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

Must read

ಜಮೀರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ಪ್ರತಿಕ್ರಿಯಿಸಿದ್ದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.. ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಯಿತು.
ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅವರು ಮಾಡಿದ ಆಕ್ಷೇಪಾರ್ಹ ಹೇಳಿಕೆಗೆ ಪುನೀತ್ ವಿರೋಧ ವ್ಯಕ್ತಪಡಿಸಿದ್ದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕರಿಯ ಎಂದು ಜಮೀರ್‌ ಅಹ್ಮದ್‌ ನಿಂದಿಸಿದ್ದರು. ಇದೇ ಹೇಳಿಕೆಯನ್ನು ಮುಂದಿಟ್ಟು ಫೇಸ್‌ಬುಕ್‌ ಲೈವ್‌ನಲ್ಲಿ ಜಮೀರ್‌ ವಿರುದ್ಧ ಪುನೀತ್‌ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಜೊತೆಗೆ ಸಚಿವರಿಗೆ ಬೆದರಿಕೆ ಹಾಕಿದ್ದರು.

- Advertisement -spot_img

More articles

- Advertisement -spot_img

Latest article