ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ ಮಾಡಿದರು. ಪರಿಚ್ಛೇಧ 370 ಮತ್ತು 35(ಎ) ಕೂಡ ಸಹ ರದ್ದು ಮಾಡಲಾಯ್ತು. ಆಡಳಿತಾತ್ಮಕ ದೃಷ್ಟಿಯಿಂದ ಜಮ್ಮು, ಕಾಶ್ಮೀರ ಮತ್ತು ಲಡಾಕ್ ಎಂದು ಮೂರು ವಿಭಾಗಗಳಾಗಿ ವಿಂಗಡನೆ ಮಾಡುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಯ್ತು.
