ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನು ಚುನಾವಣೆ ಇರುವುದಿಲ್ಲ..? ಇದು ಮೋದಿ ಮಾಸ್ಟರ್ ಪ್ಲಾನ್..!

0
285

ಎಲ್ಲೆಡೆ ಚರ್ಚೆಯಾಗುತ್ತಿರುವ ಪ್ರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಸ್ವಾತಂತ್ರ್ಯ ದಿನದಂದು ವಿಭಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.


ಜಮ್ಮು ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿಸುವ ಮೂಲಕ ಕಾಶ್ಮೀರದ ಕಣಿವೆ ಪ್ರದೇಶದಿಂದ ವಿಭಜಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ಚರ್ಚೆಗಳು ಇದೀಗ ಆರಂಭವಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ಉದ್ವಿಗ್ನ ಪರಿಸ್ಥಿತಿಗಳನ್ನು ನಿಯಂತ್ರಿಸಲು, ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮತ್ತು ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸಲು ಅದರ ವಿಭಜನೆಗೆ ಮೋದಿ ನೇತೃತ್ವದಲ್ಲಿ ಕೇಂದ್ರ ಉದ್ದೇಶಿಸಿದೆ ಎಂದು ಹೇಳಲಾಗಿದೆ.
ಹಾಗೆ ಕಾಶ್ಮೀರ ಕಣಿವೆ ಭಾಗದಿಂದ ಜಮ್ಮುವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಿದ ಬಳಿಕ ಕಾಶ್ಮೀರ ಮತ್ತು ಲಡಾಕ್‌ಗಳನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿ ಈ ಎರಡೂ ಕೇಂದ್ರಾಡಳಿತ ಪ್ರದೇಶಗಳನ್ನು ದೆಹಲಿ ಮೂಲದ ಗವರ್ನರ್ ನಿಯಂತ್ರಿಸುವಂತೆ ಮಾಡಲಿದ್ದು ಇಲ್ಲಿ ರಾಜಕೀಯ ಪಕ್ಷಗಳಿಗೆ ಅವಕಾಶ ಇರುವುದಿಲ್ಲ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

LEAVE A REPLY

Please enter your comment!
Please enter your name here