No menu items!
16.9 C
Munich
Monday, June 15, 2026

ಜಾತಿ ನಿಂದನೆ ಕೇಸ್: ಕೋರ್ಟ್ ಗೆ ಬರದೇ ಕಳ್ಳಾಟ; ವಕೀಲ ಜಗದೀಶ್ ಗೋವಾದಲ್ಲಿ ಅರೆಸ್ಟ್!

Must read

 

ಬೆಂಗಳೂರು:- ಪ್ರಕರಣವೊಂದರಲ್ಲಿ ಕೋರ್ಟ್ ಗೆ ಹಾಜರಾಗದೇ ಕಳ್ಳಾಟ ಆಡುತ್ತಿದ್ದ ವಕೀಲನನ್ನು ಅರೆಸ್ಟ್ ಮಾಡಲಾಗಿದೆ.

ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪದ ಮೇಲೆ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಜಗದೀಶ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಸಾಕಷ್ಟು ಬಾರಿ ನೋಟಿಸ್ ಜಾರಿಗೊಳಿಸಿದರೂ ಹಾಜರಾಗಿರದ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜಗದೀಶ್ ಗೋವಾದಲ್ಲಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಸದ್ಯ ಅವರನ್ನು ಬಂಧಿಸಲಾಗಿದೆ.

- Advertisement -spot_img

More articles

- Advertisement -spot_img

Latest article