ಸೋಮವಾರದಿಂದ ಆರಂಭವಾಗಿ ಜುಲೈ 16ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
“ಸೋಮವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಕೂಡ ಉತ್ತಮ ಮಳೆಯಾಗಿದೆ. ಜುಲೈ 16ರವರೆಗೂ ಮಳೆ ಮುಂದುವರೆಯಲಿದ್ದು, ಅಧಿಕ ಮಳೆಯಾಗಲಿದೆ” ಎಂದು ಹವಾಮಾನ ಇಲಾಖೆ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಮುಂದೆ ಓದಿ…
ಜುಲೈ 16ರವರೆಗೂ ವ್ಯಾಪಕ ಮಳೆ :
“ಜುಲೈ 12ರಿಂದ ಜುಲೈ 16ರವರೆಗೂ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಜುಲೈ 10-16ರವರೆಗೂ ಕೆಲವು ಪ್ರದೇಶದಲ್ಲಿ ಭಾರೀ ಮಳೆ ದಾಖಲಾಗಲಿದೆ” ಎಂದು ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ವಾರದಿಂದ ಮಳೆ ಕಾರಣವಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ.