ಜುಲೈ 8 ರ ಸಂಜೆಯಿಂದ ವಿಸಿ ನಾಲೆಗೆ 15 ದಿನ ನೀರು ಬಿಡಲಾಗುತ್ತದೆ !

Date:

ಬೆಂಗಳೂರು: ಜುಲೈ 8 ರ ಸಂಜೆಯಿಂದ ವಿಸಿ ನಾಲೆಗೆ 15 ದಿನ ನೀರು ಬಿಡಲಾಗುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ 15 ದಿನದಿಂದ ಕೆಆರ್ಎಸ್ನಿಂದ ವಿಸಿ ನಾಲೆಗೆ ನೀರು ಬಿಡಬೇಕು ಎಂಬ ಒತ್ತಡ ಇತ್ತು. ಈಗ ಅಲ್ಲಿ ನೀರು ಹೆಚ್ಚಾಗಿದೆ. ಮಾರ್ಚ್, ಏಪ್ರಿಲ್, ಮೇನಲ್ಲಿ ನೀರು ಬಿಡದಿರೋದ್ರಿಂದ ಜಾನುವಾರು ಹಾಗೂ ಪಕ್ಷಿಗಳಿಗೆ ಸಮಸ್ಯೆ ಆಗಿತ್ತು. ಹೀಗಾಗಿ ನೀರು ಬಿಡಬೇಕು ಎಂದು ಒತ್ತಾಯ ಬಂದಿತ್ತು. ಜುಲೈ 8 ರ ಸಂಜೆಯಿಂದ ವಿಸಿ ನಾಲೆಗೆ 15 ದಿನ ನೀರು ಬಿಡಲಾಗುತ್ತದೆ ಎಂದು ಹೇಳಿದರು.
ನೀರು ಬಿಡಬೇಕು ಎಂದು ಅಲ್ಲಿನ ಶಾಸಕರು ಒತ್ತಾಯ ಮಾಡಿದ್ದರು. ಕುಡಿಯುವ ನೀರು ಹಾಗೂ ಜಾನುವಾರುಗಳಿಗಾಗಿ ಮಾತ್ರ ನೀರು ಬಿಡುತ್ತೇವೆ. ಕೃಷಿಗೆ ಸದ್ಯಕ್ಕೆ ನೀರು ಹರಿಸೋದಿಲ್ಲ. ಸದ್ಯಕ್ಕೆ ಅಂದುಕೊಂಡಷ್ಟು ಮಳೆಯಾಗಿಲ್ಲ. ಜುಲೈ ಅಂತ್ಯಕ್ಕೆ ಪೂರ್ಣ ಪ್ರಮಾಣದ ಕ್ಲಾರಿಟಿ ಸಿಗುತ್ತೆ. ನಿತ್ಯ 3,000 ಕ್ಯೂಸೆಕ್ ನೀರು ಬಿಡುವ ಚಿಂತನೆ ಇದೆ ಎಂದರು.

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...