ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ !

Date:

 

 

ಬೆಂಗಳೂರು: ಮನಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಜು.12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ. ಈ ಬಾರಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಶಾಸಕರು, ಸಿಎಂ ಪರಮಾಪ್ತರು ಬುಧವಾರ ಪ್ರೆಸ್‌ಮೀಟ್‌ ಮಾಡಿದ್ದಾರೆ. 1992ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009 – 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‌ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ವಿಜಯೇಂದ್ರ ಮಾಹಿತಿ ನೀಡಿದರು.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...