ಜೂನ್ 16ರವರೆಗೂ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

1
42

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಕಡೆಗಳಲ್ಲಿ ಮಳೆ ಶುರುವಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಂಜೆಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜೂನ್ 12 ರಂದು ಬೆಳಗ್ಗೆ 8.30ರಿಂದ ಜೂನ್ 16ರ ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಮಳೆಯ ಜತೆ ಗಾಳಿ ಮತ್ತು ಸಿಡಿಲು ಕೂಡ ಇರಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್‌ನಲ್ಲಿ 29.4 ಗರಿಷ್ಠ ಉಷ್ಣಾಂಶ ದಾಖಲಾಗಿದೆ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಣಂಬೂರು, ಕಾರ್ಕಳ, ಸುಳ್ಯ, ಮಂಗಳೂರು, ಕುಂದಾಪುರ, ಕೋಟ, ಮೂಡುಬಿದಿರೆ, ಭಟ್ಕಳ, ಮುಲ್ಕಿ, ಸುಬ್ರಹ್ಮಣ್ಯ, ಬೀದರ್, ಭಾಗಮಂಡಲ, ಕದ್ರ, ಸಿದ್ದಾಪುರ, ಕಳಸ, ಕೊಟ್ಟಿಗೆಹಾರ, ಜಯಪುರ, ಚಿಂಚೋಳಿ, ಕಾರವಾರದಲ್ಲಿ ಮಳೆಯಾಗಿದೆ.

1 COMMENT

LEAVE A REPLY

Please enter your comment!
Please enter your name here