ಜೂನ್ 17ರವರೆಗೂ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ!

Must read

ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 17ರವರೆಗೂ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಜೂ.1ರಿಂದ ಮೀನುಗಾರಿಕೆ ಸಂಪೂರ್ಣ ಬಂದ್ ಆಗಿರುವುದರಿಂದ ಯಾಂತ್ರೀಕೃತ ಬೋಟ್‌ಗಳು ಕಡಲಿಗೆ ಇಳಿದಿಲ್ಲ. ಧಾರವಾಡ, ಹಾವೇರಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದ್ದು, ಮಳೆಗಾಲದ ವಾತಾವರಣ ನಿರ್ಮಾಣವಾಗಿದ್ದು, ರೈತರು ಖುಷಿಯಾಗಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚಿನ ಮಳೆ ನಿರೀಕ್ಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತಮುಂಗಾರು ಚುರುಕುಗೊಂಡಿದೆ ಹೆಚ್ಚಿನ ಮಳೆಯಾಗುತ್ತಿದೆ.

- Advertisement -spot_img

More articles

- Advertisement -spot_img

Latest article