ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

Date:

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿರುವ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಜಿಬಿಎ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಿತು.

ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಪ್ರಸ್ತುತ ಅಂತಿಮ ಹಂತದ ಮೀಸಲಾತಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಈ ಪ್ರಕ್ರಿಯೆ ಫೆಬ್ರವರಿ 28ರ ವರೆಗೆ ಮುಂದುವರಿಯಲಿದೆ. ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗಕ್ಕೆ ಮುಂದಿನ ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕಿದೆ ಎಂದು ಸರ್ಕಾರದ ಪರ ವಕೀಲರು ಕೋರ್ಟ್‌ಗೆ ತಿಳಿಸಿದರು.

ಚುನಾವಣಾ ಆಯೋಗದ ಪರ ವಕೀಲರು, ಮಾರ್ಚ್ 16ರ ವೇಳೆಗೆ ಮತದಾರರ ಪಟ್ಟಿಯ ಪರಿಶೀಲನೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು. ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿರುವುದರಿಂದ, ಮೇ ಕೊನೆಯ ವಾರದವರೆಗೆ ಸಮಯ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದರು.

ಈ ವೇಳೆ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಸಲು ಎಷ್ಟು ಸಮಯ ಬೇಕು ಎಂದು ನ್ಯಾಯಾಲಯ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಜೂನ್ ತಿಂಗಳವರೆಗೆ ಸಮಯ ಅಗತ್ಯವಿರಬಹುದು ಎಂದು ತಿಳಿಸಿತು.

ಎಲ್ಲ ವಾದಗಳನ್ನು ಆಲಿಸಿದ ಬಳಿಕ ಸುಪ್ರೀಂಕೋರ್ಟ್, ಜೂನ್ 30ರೊಳಗೆ ಜಿಬಿಎ ಚುನಾವಣೆಯನ್ನು ಕಡ್ಡಾಯವಾಗಿ ನಡೆಸುವಂತೆ ಅಂತಿಮ ನಿರ್ದೇಶನ ನೀಡಿತು. ಜೊತೆಗೆ ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ಮತ್ತೆ ಸಮಯ ವಿಸ್ತರಣೆ ಕೇಳಬಾರದೆಂದು ಕಠಿಣ ಎಚ್ಚರಿಕೆ ನೀಡಿತು.

Share post:

Subscribe

spot_imgspot_img

Popular

More like this
Related

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು:...

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ ಬಂಧನ

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ...

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...