ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ, ಅದರಂತೆ ಮುಂದಿನ ಮೇ 25 ರಿಂದ ಜೂನ್ 7ರವರೆಗೆ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಹಳ್ಳಿಗಳಿಗೂ ವಿಸ್ತರಣೆಗೊಂಡಿದೆ, ಆದುದರಿಂದ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
ಸಚಿವರು, ಅಧಿಕಾರಿಗಳೊಂದಿಗೆ, ಮುಖ್ಯಮಂತ್ರಿಗಳು ಸಭೆ ನಡೆಸಿ, ಈ ನಿರ್ಧಾರಕ್ಕೆ ಬಂದಿದ್ದು ರಾಜ್ಯದ ಜನರು ಸಹಕರಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.