ಇಂಜಿನಿಯರಿಂಗ್ ಪ್ರವೇಶಕ್ಕೆ ನಡೆಸಲಾಗುವ ಜೆಇಇ (Main) ನಾಲ್ಕನೇ ಹಂತದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಆಗಸ್ಟ್ 26ರಿಂದ ಸೆಪ್ಟೆಂಬರ್ 02ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಜೆಇಇ ಪರೀಕ್ಷೆಯ ಮೊದಲ ಎರಡು ಹಂತ ಕಳೆದ ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಮುಗಿದಿದೆ.
ಈ ಮುನ್ನ ಪರೀಕ್ಷೆಯು ಜುಲೈ 27ರಿಂದ ಆಗಸ್ಟ್ 02ವರೆಗೆ ನಿಗದಿಯಾಗಿತ್ತು. ಇದೀಗ ಆಗಸ್ಟ್ 26ಕ್ಕೆ ಮುಂದೂಡಲಾಗಿದ್ದು, ಎರಡು ಸೆಷನ್‌ಗಳ ನಡುವೆ ನಾಲ್ಕು ವಾರಗಳ ಅಂತರ ನೀಡಲಾಗಿದೆ. ಪರೀಕ್ಷೆಗೆ ಒಟ್ಟು 7.32 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಪ್ರಕ್ರಿಯೆ ಜಾರಿಯಲ್ಲಿದೆ. ಜುಲೈ 20ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.