ಜೆಎನ್‌ಯು ಕುಲಪತಿ ಎಂ ಜಗದೀಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ !?

0
579

ಜೆಎನ್‌ಯು ಮೇಲೆ ನಡೆದಿದ್ದ ದಾಳಿಯ ಸಂದರ್ಭ ವಿದ್ಯಾರ್ಥಿಗಳನ್ನು ರಕ್ಷಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಜೆಎನ್‌ಯು ಕುಲಪತಿ ಎಂ ಜಗದೀಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನೂರಾರು ಪ್ರತಿಭಟನಾಕಾರರು ಮಾನವ ಸಂಪನ್ಮೂಲ ಇಲಾಖೆಯ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಸಿದರು.

ಮಂಡಿ ಹೌಸ್‌ನಿಂದ ಆರಂಭವಾದ ಜಾಥದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.ಸಿಪಿಎಂ ಮುಖಂಡರಾದ ಸೀತಾರಾಮ ಯೆಚೂರಿ, ಡಿ ರಾಜಾ, ಪ್ರಕಾಶ್ ಕಾರಟ್ ಮತ್ತು ಬೃಂದಾ ಕಾರಟ್, ಎಲ್‌ಜೆಡಿ ಮುಖಂಡ ಶರದ್ ಯಾದವ್ ಸಹಿತ ಹಲವು ರಾಜಕೀಯ ಮುಖಂಡರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.