ಉಪ ಚುನಾವಣೆಯಲ್ಲಿ ನೆಲ ಕಚ್ಚಿ ಕೂತಿದ್ದ ಜೆಡಿಎಸ್ ಪಕ್ಷ ಮುಂದಿನ ನಡೆ ಏನು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇತ್ತು ಆದರೆ ಜೊತೆಗೆ ಇನ್ನೊಂದು ವಿಷಯ ಕೂಡ ಹರಿದಾಡ್ತಿದೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ದೇವೇಗೌಡರ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಅವಕಾಶ ಸಿಕ್ಕಿರಲಿಲ್ಲ.
ಆಗ ಜೆಡಿಎಸ್ ಯುವಘಟಕದ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು ನಂತರ ಹಾಸನ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಜಯಗಳಿಸಿದ ನಂತರದಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸೋತಿರುವಂತಹ ನಿಖಿಲ್ ಕುಮಾರ್ ಅವರನ್ನು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಇದರಿಂದ ಅಸಮಾಧಾನಗೊಂಡಿದ್ದ ಪ್ರಜ್ವಲ್ ರೇವಣ್ಣ ದೇವೇಗೌಡರ ಬಳಿ ಆ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ .