ರಾಜ್ಯದಲ್ಲಿ ಕಾಂಗ್ರೆಸ್ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಆಂತರಿಕ ಅಸಮಾಧಾನದಿಂದ ಮತ್ತು ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ 17 ಮಂದಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.
ಈಗ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಉಪ ಚುನಾವಣೆ ಎದುರಿಸುತ್ತಿದ್ದೇವೆ.ನಮ್ಮಲ್ಲಿ ಮೂಲ, ವಲಸಿಗ ಎಂಬ ಭೇದ ಭಾವವಿಲ್ಲ. 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವುದು ಸೂರ್ಯ, ಚಂದ್ರರಷ್ಟೇ ಸತ್ಯ ಎಂದು ಹೇಳಿದರು.