ಜೈಲಿನಿಂದ ಇಂದು ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಬಿಡುಗಡೆ

Date:

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ನಿನ್ನೆ ಜಾಮೀನು ಮಂಜೂರಾಗಿತ್ತು. ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗಾಗಿ ಜೈಲಿನಿಂದ ಇಂದು ಸೋನು ಬಿಡುಗಡೆ ಆಗಲಿದ್ದಾರೆ.
ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿದ್ದ ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ ಪೊಲೀಸ್ ಠಾಣೆಯಲ್ಲಿ ಗೋಳಾಡಿದ್ದರು. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದರು. ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ದೂರು ದಾಖಲಿಸಿ ಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಮಾರ್ಚ್ 22ರಂದು ಬಂಧಿಸಿದ್ದರು. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆದಿತ್ತು.
ನಾನು ಮಗು ಕರೆದುಕೊಂಡು ಬಂದು 15 ದಿನ ಆಗಿದೆ. ಹಾಗೆ ಕರೆದುಕೊಂಡು ಬಂದಿರುವುದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಗೊತ್ತಿದ್ದರೆ, ನಾನು ಪ್ರೊಸಿಜರ್ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದರು ಸೋನು. ಕೊನೆಗೆ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...