ಟಾಯ್ಲೇಟ್ ಸ್ವಚ್ಛಗೊಳಿಸಿದ ಸಂಸದ!

Date:

ಭೋಪಾಲ್: ಸದಾ ಒಂದಲ್ಲಾ ಒಂದು ಸುದ್ದಿಯಲ್ಲಿರುವ ಮಧ್ಯಪ್ರದೇಶದ ರೇವಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಟಾಯ್ಲೆಟ್ ಸ್ವಚ್ಛಗೊಳಿಸುವ ಮೂಲಕವಾಗಿ ಚರ್ಚೆಯಲ್ಲಿದ್ದಾರೆ.

ಅಧಿಕಾರಿಗಳಿಗೆ ಕರ್ತವ್ಯದ ಪಾಠ, ಜವಾಬ್ದಾರಿ ತಿಳಿಸಿಕೊಡುವ ಉದ್ದೇಶದಿಂದ ಖದ್ದೂ ಟಾಯ್ಲೆಟ್ ಕ್ಲೀನ್ ಮಾಡಿದ್ದಾರೆ. ಮಿಶ್ರಾ ಅವರು ಮೌಗಂಜ್ ತೆಹ್‍ಸಿಲ್ ಕೊರೊನಾ ಕೇರ್ ಸೆಂಟರ್ ತಪಾಸಣೆಗಾಗಿ ಬಂದಿದ್ದರು. ಈ ವೇಳೆ ಕೊರೊನಾ ಸೆಂಟರ್ ತುಂಬಾ ಗಲೀಜಾಗಿತ್ತು.

ಮಿಶ್ರಾ ಸ್ವಚ್ಛಗೊಳಿಸಲು ಮುಂದಾದರು. ಕೈಗೆ ಗ್ಲೌಸ್ ಹಾಕಿಕೊಂಡು ಟಾಯ್ಲೆಟ್‍ನ ಕಮೋಡ್ ಸ್ವತಃ ಅವರೇ ಸ್ವಚ್ಛಗೊಳಿಸಿದ್ದಾರೆ. ಬ್ರಷ್, ಬಕೆಟ್ ನೀಡುವಂತೆ ಮಿಶ್ರಾ ಕೇಳಿದ್ದಾರೆ. ಆದರೆ ಅಧಿಕಾರಿಗಳು ನೀಡಲು ಹಿಂಜರಿದಾಗ ಮಿಶ್ರಾ ಅವರು ಕೈಯಲ್ಲೇ ಸ್ವಚ್ಛ ಮಾಡಿದ್ದಾರೆ. ಈ ವೇಳೆ ಕೊರೊನಾ ಸೆಂಟರ್‍ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...