ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಐವರು ಸ್ಥಳದಲ್ಲಿಯೇ ದುರ್ಮರಣ
ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ದುರ್ಮರಣಕ್ಕಿಡಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕುಂದವಾಡಿ ಗ್ರಾಮದಲ್ಲಿ ನಡೆದಿದೆ. ಮಲೆಮಹದೇಶ್ವರಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಇಂದು ನಡೆಯುತ್ತಿದ್ದ ರಥೋತ್ಸವಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.